ಚಿಕ್ಕಮಗಳೂರು: ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಶೀಘ್ರವೇ ಸಭೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೂ ಮೊದಲೇ ಸಿಎಂ ನೇತೃತ್ವದಲ್ಲಿ ಕಾರ್ಮಿಕರ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಸಾರಿಗೆ ಇಲಾಖೆಯಲ್ಲಿ ನೌಕರರ ವೇತನ ಪರಿಷ್ಕರಣೆ ಹೊರತು ಬೇರೆ ಸಮಸ್ಯೆ ಇಲ್ಲ. ಐದು ದಿನದ ಹಿಂದೆ ಸಿಎಂ ಜೊತೆ ಈ ಬಗ್ಗೆ ಮಾತುಕತೆ ನಡೆಸಿದ್ದೇನೆ. ಮುಖ್ಯಮಂತ್ರಿಯವರ ಕಾರ್ಯದರ್ಶಿ ಅಂಜು ಪರ್ವೇಜ್ ಅಧಿವೇಶನಕ್ಕೆ ಮುನ್ನವೇ ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಸಭೆ ನಡೆಸುವ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ ಎಂದರು.
