HomeLatest Newsಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಯಾವುದೇ ಕಾರಣಕ್ಕೂ ಆಟದ ಅವಧಿ ಕಡಿತಗೊಳಿಸದಂತೆ ಶಿಕ್ಷಣ ಇಲಾಖೆ ಆದೇಶ

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಯಾವುದೇ ಕಾರಣಕ್ಕೂ ಆಟದ ಅವಧಿ ಕಡಿತಗೊಳಿಸದಂತೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳ ಆಟದ ಅವಧಿ ಕಡಿತಗೊಳಿಸದಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಸಮಯದಲ್ಲಿ ಮಕ್ಕಳಿಗೆ ನಿಗದಿಪಡಿಸಿದ ಆಟದ ಅವಧಿಯನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸದಂತೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

ಎಸ್ಎಸ್ಎಲ್ಸಿ ಯಲ್ಲಿ ಉತ್ತಮ ಫಲಿತಾಂಶ ನೀಡುವ ಉದ್ದೇಶದಿಂದ ಹತ್ತನೇ ತರಗತಿ ಮಕ್ಕಳ ಆಟದ ಸಮಯ ಕಡಿತಗೊಳಿಸಲಾಗುತ್ತಿದೆ ಎನ್ನುವ ದೂರುಗಳನ್ನು ಆಧರಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಕ್ಷಣ ಇಲಾಖೆಗೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಸೂಚನೆ ನೀಡಿದ ಶಿಕ್ಷಣ ಇಲಾಖೆ ಆಟದ ಅವಧಿ ಕಡಿತಗೊಳಿಸಿದಂತೆ ತಿಳಿಸಿದೆ.

ಆಟ, ಕಲೆ ಮತ್ತು ಇನ್ನಿತರ ಪಠ್ಯೇತರ ಚಟುವಟಿಕೆಗಳು ಮಕ್ಕಳ ಸಮಗ್ರ ವೈಯಕ್ತಿಕ ವಿಕಾಸದ ಅವಿಭಾಜ್ಯ ಅಂಗವಾಗಿದೆ. ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪ್ರಕಾರ ಆಟ ಮಕ್ಕಳ ಹಕ್ಕು. ಅದನ್ನು ನಿರ್ಬಂಧಿಸುವುದು ಹಕ್ಕಿನ ಉಲ್ಲಂಘನೆಯಾಗುತ್ತದೆ. ಅಲ್ಲದೇ ಆಟದ ಸಮಯ ಕಡಿತಗೊಳಿಸುವುದರಿಂದ ಮಕ್ಕಳ ಕಲಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹೀಗಾಗಿ ಶಾಲಾ ಸಮಯದಲ್ಲಿ ಮಕ್ಕಳಿಗೆ ನಿಗದಿಪಡಿಸಿದ ಆಟದ ಅವಧಿಯನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸಬಾರದು ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular