ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ಜಿಲ್ಲೆಯ ವತಿಯಿಂದ ಗ್ರಾಮೀಣ ಭಾಗದ ಆಸಕ್ತ ಯುವಕರಿಗಾಗಿ ಉಚಿತ ಸ್ವಯಂ ಉದ್ಯೋಗ ತರಬೇತಿ ಹಾಗೂ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ತರಬೇತಿಯಲ್ಲಿ 13 ದಿನಗಳ ಕೃಷಿ ಉದ್ಯಮಿ (ಕುರಿ ಸಾಕಾಣಿಕೆ, ಹೈನುಗಾರಿಕೆ) ತರಬೇತಿ ಮತ್ತು 30 ದಿನಗಳ ಮೊಬೈಲ್ ರಿಪೇರಿ ಕೋರ್ಸ್ ಲಭ್ಯವಿದ್ದು, ನವೆಂಬರ್ 26ರಂದು ಸಂದರ್ಶನ ನಡೆಯಲಿದೆ ಮತ್ತು ನ. 27 ರಿಂದ ತರಬೇತಿಯು ಪ್ರಾರಂಭವಾಗಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಒದಗಿಸಲಾಗುವುದು. ಜೊತೆಗೆ ತರಬೇತಿ ಪೂರ್ಣಗೊಳಿಸಿದವರಿಗೆ ಬ್ಯಾಂಕಿನ ಮೂಲಕ ಸಾಲ ಸೌಲಭ್ಯ ಕಲ್ಪಿಸಲು ಸಹ ಪ್ರಯತ್ನಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು 18 ರಿಂದ 45 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು ಮತ್ತು ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ನಿವಾಸಿಯಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.

ಆಸಕ್ತರು ತಮ್ಮ ಆಧಾರ ಕಾರ್ಡ್, ರೇಶನ್ ಕಾರ್ಡ್, ಪಾನ್ ಕಾರ್ಡ್, ಎಸ್‌ಬಿಐ ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್, ವಿದ್ಯಾಭ್ಯಾಸ ಪ್ರಮಾಣಪತ್ರ ಹಾಗೂ 3 ಪಾಸ್‌ಪೋರ್ಟ್ ಸೈಜ್ ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.

 ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿ ಅಥವಾ ದೂ.ಸಂ.: 08539-231038, ಮೊ.ಸಂ: 9483618178, 7259073827, 9538096796, 9481085217 ಗೆ ಸಂಪರ್ಕಿಸಬಹುದು ಎಂದು ಎಸ್‌ಬಿಐ ಆರ್‌ಸೆಟಿಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read