ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಮತ್ತು ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯವನ್ನು ವಿಸ್ತರಿಸಿದ್ದು, ನಿಗಮ ಮಂಡಳಿ, ಸ್ಥಳೀಯ ಸಂಸ್ಥೆ ನೌಕರರಿಗೆ ಅನ್ವಯವಾಗಲ್ಲ ಎಂದು ಹೇಳಲಾಗಿದೆ.
ಸರ್ಕಾರದ ಆದೇಶ ಸಂಖ್ಯೆ: ಅಇ 34 ಪಿಇಎನ್ 2018, ದಿನಾಂಕ:23.06.2018 ಮತ್ತು ಸರ್ಕಾರಿ ಆದೇಶ ಸಂಖ್ಯೆ:ಆಇ 149 ಪಿಇಎನ್ 2022. ದಿನಾಂಕ:19.10.2022ರಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಮತ್ತು ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯವನ್ನು ದಿನಾಂಕ:01.04.2006 ರಿಂದ ಜಾರಿಗೆ ಬರುವಂತೆ ವಿಸ್ತರಿಸಿ, ಆದೇಶಿಸಿಲಾಗಿದೆ.
ಸದರಿ ಆದೇಶವು ರಾಜ್ಯ ಸರ್ಕಾರದಿಂದ ಸ್ಥಾಪಿತವಾದ ಸ್ವಾಯತ್ತತಾ ಸಂಸ್ಥೆಗಳು, ನಿಗಮ-ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳು ಹಾಗೂ ಅನುಕಂಪ ಆಧಾರದ ಮೇಲೆ ನೌಕರಿ ಪಡೆದ ನೌಕರರಿಗೆ ಅನ್ವಯವಾಗುವುದಿಲ್ಲ ಎಂದು ಆಡಳಿತ ಇಲಾಖೆಗೆ ತಿಳಿಸಿದೆ.

