ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ಪಟ್ಟಣದ ಹೊರವಲಯದಲ್ಲಿ ಆಂಬ್ಯುಲೆನ್ಸ್ ನಲ್ಲಿ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಎಲೆಮಾಳ ಮುಖ್ಯರಸ್ತೆಯ ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಘಟನೆ ನಡೆದಿದೆ. ಕುರಟ್ಟಿ ಹೊಸೂರು ಗ್ರಾಮದ ಶಿಲ್ಪಾ ಅವರಿಗೆ ಮಂಗಳವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಂಬ್ಯುಲೆನ್ಸ್ ನಲ್ಲಿ ಕೌದಳ್ಳಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಅಲ್ಲಿನ ವೈದ್ಯರ ಸಲಹೆಯಂತೆ ಕೊಳ್ಳೇಗಾಲಕ್ಕೆ ಕರೆತರುವಾಗಲೇ ಮಾರ್ಗ ಮಧ್ಯದಲ್ಲಿ ಆಂಬ್ಯುಲೆನ್ಸ್ ನಲ್ಲಿ ಹೆರಿಗೆಯಾಗಿದೆ.
ಆಂಬ್ಯುಲೆನ್ಸ್ ಸಿಬ್ಬಂದಿ ರಾಣಿ, ನಾಗರಾಜು ಅವರು ಸಕಾಲಕ್ಕೆ ಚಿಕಿತ್ಸೆ ನೀಡಿ ಸುಸೂತ್ರವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
