ಬೆಂಗಳೂರು : ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯವೊಂದು ನಡೆದಿದ್ದು, ನಾದಿನಿ ಮೇಲೆ ಭಾವನೇ ಅತ್ಯಾಚಾರ ಎಸಗಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ನಡೆದಿದೆ.
ಸುರಪುರ ತಾಲೂಕಿನ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ಆರೋಗ್ಯ ತಪಾಸಣೆಗಂತ ಹೋದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಬಾಲಕಿಯನ್ನ ತಪಾಸಣೆ ಮಾಡಿದಾಗ ಆಕೆ ಗರ್ಭಿಣಿಯಾಗಿರುವುದು ಧೃಡವಾಗಿದೆ. ಪೋಷಕರು ಬಾಲಕಿಯನ್ನ ವಿಚಾರಿಸಿದಾಗ ಭಾವ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಹೇಳಿದ್ದಾನೆ.ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
