ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ 7.11 ಲಕ್ಷ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ನಗರದಾದ್ಯಂತ ನಾಕಾಬಂಧಿ ವಿಧಿಸಲಾಗಿದೆ.
ದರೋಡೆಕೋರರ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಡಿಸಿಪಿ ಲೋಕೇಶ್ ಜಗಲಾಸರ್ ನೇತೃತ್ವದಲ್ಲಿ ತಂಡ ರಚನೆಯಾಗಿದ್ದು, ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಟೋಲ್ ಗಳಲ್ಲಿ ಪ್ರತಿ ವಾಹನಗಳನ್ನು ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಆವಲಹಳ್ಳಿ ಬಳಿ ದರೋಡೆಕೋರರ ವಾಹನ ಚಲಿಸಿದ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ತಿಳಿದುಬಂದಿದೆ.
ಮತ್ತೊಂದೆಡೆ ಎಟಿಎಂಗೆ ಹಣ ತುಂಬಲು ತಂದಿದ್ದ ಸಿಎಂಎಸ್ ಏಜೆನ್ಸಿಯ ವಾಹನ ಚಾಲಕ ಸೇರಿದಂತೆ ನಾಲ್ವರು ಸಿಎಂ ಎಂಎಸ್ ಸಿಬ್ಬಂದಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
