ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ: ಗೃಹಸಚಿವರಿಗೆ ಶಾಸಕ ಚನ್ನಬಸಪ್ಪ ಮನವಿ

ಬೆಂಗಳೂರು: ಶಿವಮೊಗ್ಗ ಮಹಾನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ಗಂಭೀರವಾಗಿ ಹಾಳಾಗಿರುವ ಹಿನ್ನೆಲೆಯಲ್ಲಿ ಇಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ(DG ಮತ್ತು IGP) ಡಾ. ಎಂ.ಎ. ಸಲೀಮ್ ಹಾಗೂ ಅಪರ ಪೊಲೀಸ್ ಮಹಾ ನಿರ್ದೇಶಕ(ADGP) ಹಿತೇಂದ್ರ ಕುಮಾರ್ ಅವರನ್ನು ಭೇಟಿಯಾಗಿ, ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿ ಕರ್ತವ್ಯ ನಿರ್ವಹಣೆಯ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳಲು ಆಗ್ರಹಿಸಿದರು.

ಕಳೆದ ಎರಡು ವರ್ಷಗಳಿಂದ ನಗರದಲ್ಲಿ ನಾಗರಿಕರ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆಗಳು, ಮಾದಕ ವಸ್ತುಗಳ ಮಿತಿಮೀರಿದ ಬಳಿಕೆ ಮತ್ತು ಅಪರಾಧ ಕೃತ್ಯಗಳ ವಿಪರೀತ ಹೆಚ್ಚಳಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಲಾಯಿತು. ಇತ್ತೀಚೆಗೆ ನಗರದ ನಿವಾಸಿಯಾದ ಹರೀಶ್ ಎಂಬುವರ ಮೇಲೆ ಮುಸಲ್ಮಾನ ಗುಂಡಗಳಿಂದ ನಡೆದ ಹಲ್ಲೆ ಪ್ರಕರಣದ ಕುರಿತು ತಿಳಿಸಿದರು.

ಮನವಿಗೆ ಗೃಹ ಸಚಿವರು ಹಾಗೂ ಅಧಿಕಾರಿಗಳು ತಕ್ಷಣವೇ ಮತ್ತು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶಿವಮೊಗ್ಗದ ಕಾನೂನು ಸುವ್ಯವಸ್ಥೆಯ ಗಂಭೀರತೆಯನ್ನು ಮನಗಂಡು, ಶಿವಮೊಗ್ಗದ ಸುರಕ್ಷತೆ ಮತ್ತು ಸಾರ್ವಜನಿಕ ಶಾಂತಿಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿ, ತಕ್ಷಣದ ಕ್ರಮಕ್ಕೆ ಸೂಚಿಸಿದರು.

ಈ ಹಿನ್ನೆಲೆಯಲ್ಲಿ, ಜಿಲ್ಲೆಯ ಕಾನೂನು ಸುವ್ಯವಸ್ಥೆಯ ವಾಸ್ತವ ಪರಿಸ್ಥಿತಿ ಮತ್ತು ಪೊಲೀಸ್ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಸಮಗ್ರವಾಗಿ ಪರಿಶೀಲಿಸಿ, ಅವಶ್ಯಕ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ, ಪೂರ್ವ ವಲಯ, ದಾವಣಗೆರೆ ಐ.ಜಿ.ಪಿ(IGP) ರವಿ ಕಾಂತೇಗೌಡ ಐ.ಪಿ.ಎಸ್. ಅವರು ಗುರುವಾರಶಿವಮೊಗ್ಗ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು. ಈ ಭೇಟಿಯ ಮೂಲಕ ಪೊಲೀಸ್ ಇಲಾಖೆಯಲ್ಲಿ ನಿರ್ಲಕ್ಷ್ಯಕ್ಕೆ ಶೂನ್ಯ ಸಹಿಷ್ಣುತಾ ನೀತಿಯನ್ನು ಜಾರಿಗೊಳಿಸಿ, ಹೊಣೆಗಾರಿಕೆ ಮತ್ತು ಶಿಸ್ತನ್ನು ಮರುಸ್ಥಾಪಿಸುವ ಭರವಸೆ ಇದೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read