BIG NEWS: ರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭಕ್ಕೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 4056 ಸರ್ಕಾರಿ ಶಾಲೆಗಳಲ್ಲಿ 2025-26 ಸಾಲಿನಿಂದಲೇ ಪೂರ್ವ ಪ್ರಾಥಮಿಕ ತರಗತಿ(ಎಲ್.ಕೆ.ಜಿ., ಯುಕೆಜಿ) ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

ಪ್ರಸ್ತುತ ರಾಜ್ಯದ 2619 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ನಡೆಯುತ್ತಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇವುಗಳಲ್ಲಿ 90,195 ಮಕ್ಕಳು ದಾಖಲಾಗಿದ್ದಾರೆ. ಈ ಯೋಜನೆಯನ್ನು 70 ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟಾರೆ ಐದು ಸಾವಿರ ಶಾಲೆಗಳಿಗೆ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದರು. ಅಂತೆಯೇ ಹೊಸದಾಗಿ 4056 ಶಾಲೆಗಳಲ್ಲಿ ಈ ಸಾಲಿನಿಂದ ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಸರ್ಕಾರದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read