HomeLatest NewsBIG NEWS: ‘ಗ್ರೇಟರ್ ಬೆಂಗಳೂರು’ 5 ಪಾಲಿಕೆಗಳ ವಾರ್ಡ್ ವಿಂಗಡಣೆ ಅಂತಿಮ ಅಧಿಸೂಚನೆ ಪ್ರಕಟ: ವಾರ್ಡ್...

BIG NEWS: ‘ಗ್ರೇಟರ್ ಬೆಂಗಳೂರು’ 5 ಪಾಲಿಕೆಗಳ ವಾರ್ಡ್ ವಿಂಗಡಣೆ ಅಂತಿಮ ಅಧಿಸೂಚನೆ ಪ್ರಕಟ: ವಾರ್ಡ್ ಸಂಖ್ಯೆ 369 ಕ್ಕೆ ಏರಿಕೆ: ಮೀಸಲಾತಿ ನಿಗದಿಪಡಿಸಿ ಚುನಾವಣೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಡಿ ನೂತನವಾಗಿ ರಚಿಸಿರುವ 5 ಪಾಲಿಕೆಗಳ ವಾರ್ಡ್ ವಿಂಗಡಣೆಯ ಅಂತಿಮ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ಬೆಂಗಳೂರು ಪಶ್ಚಿಮ ನಗರ ಪಾಲಿಕೆಗೆ ಹೊಸ ವಾರ್ಡ್ ಒಂದನ್ನು ಸೇರ್ಪಡೆ ಮಾಡುವ ಮೂಲಕ 5 ನಗರ ಪಾಲಿಕೆಯ ವಾರ್ಡ್ ಸಂಖ್ಯೆಯನ್ನು 368 ರಿಂದ 300 69ಕ್ಕೆ ಹೆಚ್ಚಳ ಮಾಡಲಾಗಿದೆ‌.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದ ನಂತರ ಸೆ. 2ರಂದು ಜಿಬಿಎ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ವಾರ್ಡ್ ವಿಂಗಡಣೆ ಆಯೋಗ ರಚಿಸಲಾಗಿತ್ತು. ಆಯೋಗದ ವರದಿ ಆಧರಿಸಿ ನಗರಾಭಿವೃದ್ಧಿ ಇಲಾಖೆ ಸೆ. 30ರಂದು 5 ನಗರ ಪಾಲಿಕೆ ವಾರ್ಡ್ ವಿಂಗಡಣೆಯ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಸಲ್ಲಿಕೆಗೆ 15 ದಿನ ಕಾಲಾವಕಾಶ ನೀಡಿದ್ದು, 4000ಕ್ಕೂ ಹೆಚ್ಚು ಅಧಿಕ ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದು, ಅವುಗಳ ಪರಿಶೀಲನೆ ನಡೆಸಿ ಅಂತಿಮ ಅಧಿಸೂಚನೆಯ ಮೂಲಕ ವಾರ್ಡ್ ಸಂಖ್ಯೆಯನ್ನು ಅಂತಿಮಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ 112, ಬೆಂಗಳೂರು ಉತ್ತರ ನಗರ ಪಾಲಿಕೆಯಲ್ಲಿ 72, ಬೆಂಗಳೂರು ದಕ್ಷಿಣ ಪಾಲಿಕೆಯಲ್ಲಿ 72, ಬೆಂಗಳೂರು ಪೂರ್ವ ಪಾಲಿಕೆಯಲ್ಲಿ 50, ಬೆಂಗಳೂರು ಕೇಂದ್ರ ನಗರ ಪಾಲಿಕೆಯಲ್ಲಿ 63 ವಾರ್ಡ್ಗಳು ಇವೆ.

2015ರಲ್ಲಿ ಬಿಬಿಎಂಪಿ 198 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. 2020ರ ಸೆಪ್ಟೆಂಬರ್ ಗೆ 5 ವರ್ಷ ಆಡಳಿತ ಪೂರ್ಣಗೊಂಡಿತ್ತು. ನಂತರ ಎರಡು ಬಾರಿ ವಾರ್ಡ್ ವಿಂಗಡಣೆ ಮಾಡಿದ್ದರೂ ಚುನಾವಣೆ ನಡೆದಿರಲಿಲ್ಲ. ಬಿಬಿಎಂಪಿಯನ್ನು ವಿಸರ್ಜಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲಾಗಿದ್ದು, ಅದರ ಅಡಿ ಐದು ನಗರ ಪಾಲಿಕೆ ರಚಿಸಲಾಗಿದೆ. ಈ ಐದು ನಗರ ಪಾಲಿಕೆಗೆ ವಾರ್ಡ್ ವಿಂಗಡಣೆ ಅಂತಿಮವಾಗಿದ್ದು, ಮೀಸಲಾತಿ ನಿಗದಿಪಡಿಸಿ ಚುನಾವಣೆ ಅಧಿಸೂಚನೆ ಹೊರಡಿಸುವುದಷ್ಟೇ ಬಾಕಿ ಇದೆ. ಎಲ್ಲವೂ ಅಂದುಕೊಂಡಂತೆ ನಡೆದದಲ್ಲಿ ಫೆಬ್ರವರಿ ಅಂತ್ಯದೊಳಗೆ ಚುನಾವಣೆ ನಡೆಯಲಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular