ವಸಾಯಿ: ವಿದ್ಯಾರ್ಥಿಯೊಬ್ಬ ಶಾಲೆಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷಕ ಬರೋಬ್ಬರಿ ನೂರು ಬಸ್ಕಿ ಹೊಡೆಸಿ ಶಿಕ್ಷೆ ನೀಡಿದ್ದಾರೆ. ಬಸ್ಕಿ ಹೊಡೆದು ಸುಸ್ತಾದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ವಸಾಯಿಯಲ್ಲಿ ನಡೆದಿದೆ.
ಶಾಲೆಗೆ ತಡವಾಗಿ ಬಂದಿದ್ದಕ್ಕೆ ವಿದ್ಯಾರ್ಥಿನಿಗೆ ಶಿಕ್ಷಕ ನೂರು ಬಸ್ಕಿ ಶಿಕ್ಷೆ ಕೊಟ್ಟಿದ್ದಾನೆ. ವಿದ್ಯಾರ್ಥಿನಿ ನೂರು ಬಸ್ಕಿ ಹೊಡೆಯುವಷ್ಟರಲ್ಲಿ ಅಸ್ವಸ್ಥಳಾಗಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.
ಶಾಲಾ ಆಡಳಿತ ಮಂಡಳಿತ ಮಂಡಳಿಯ ನಿರ್ಲಕ್ಷ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಇತರ ವಿದ್ಯಾರ್ಥಿಗಳು, ಪ್ರತ್ಯಕ್ಷ ದರ್ಶಿಗಳು ಹೇಳಿರುವ ಆಧಾರದಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆದಿದೆ. ಮತ್ತೊಂದೆಡೆ ವಿದ್ಯಾರ್ಥಿನಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಲಗಿದೆ.
ಶಾಲೆಗೆ ವಿದ್ಯಾರ್ಥಿನಿ ಕೇವಲ 10 ನಿಮಿಷ ತಡವಾಗಿ ಬಂದಿದ್ದಳಂತೆ. ಅದಕ್ಕೆ 100 ಬಸ್ಕಿ ಶಿಕ್ಷೆ ವಿಧಿಸಲಾಗಿತ್ತು. ಅದೂ ಬ್ಯಾಗ್ ಕೂಡ ಬೆನ್ನಿಗೆ ಹಾಕಿಕೊಂಡೇ ಬಸ್ಕಿ ಹೊಡೆಯಲು ಶಿಕ್ಷಕ ಸೂಚಿಸಿದ್ದ. ವಿದ್ಯಾರ್ಥಿನಿ ಸುಸ್ತಿನಿಂದ ಬಳಲಿದ್ದಳು, ಆಕೆಯ ಕಾಲಿನಲ್ಲಿ ಊತ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿನಿ ಮನೆಗೆ ಹೋದ ಬಳಿಕ ನಡೆಯಲಾಗದೇ ಪರದಾಡಿದ್ದಾಳೆ. ಮಲಗಿದ್ದ ವಿದ್ಯಾರ್ಥಿನಿ ಮೇಲೆ ಎದ್ದಿಲ್ಲ. ವಿದ್ಯಾರ್ಥಿನಿಯ ಪ್ರಾಣ ಪಕ್ಷಿಯೇ ಹಾರಿಹೋಗಿದೆ. ಮಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯುತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ ಎಂದು ತಾಯಿ ಕಣ್ಣಿರಿಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
