HomeLatest Newsರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ: ಕೆಲ ಜಿಲ್ಲೆಗಳಲ್ಲಿ ಮತ್ತೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ: ಕೆಲ ಜಿಲ್ಲೆಗಳಲ್ಲಿ ಮತ್ತೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಮೈಕೊರೆಯುವ ಚಳಿ ಆರಂಭವಾಗಿದೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ರಾಅಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಕೋಲಾರ, ಚಾಮರಾಜನಗರ, ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್ ನಲ್ಲಿ ರಾಜ್ಯದಲ್ಲಿಯೇ ಅತ್ಯಂತ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ ಇದು, ತಾಪಮಾನ ಭಾರಿ ಏರಿಳಿತವಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular