ಬೆಂಗಳೂರು: ಬೆಂಗಳೂರಿನಲ್ಲಿ 7.11 ಕೋಟಿ ರೂಪಾಯಿ ಹಾಡಹಗಲೇ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಸರ್ಕಾರ, ಪೊಲೀಸ್ ಇಲಾಖೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಬೀದರ್, ಮಂಗಳೂರು ಬಳಿಕ ಈಗ ಬೆಂಗಳೂರಿನಲ್ಲಿ ಜನನಿಬಿಡ ರಸ್ತೆಯಲ್ಲಿ ದರೋಡೆ ನಡೆದಿದೆ. ಎಟಿಎಂಗೆ ಹಾಕಲುತಂದಿದ್ದ 7.11 ಕೋಟಿ ಹಣವನ್ನು ಆರ್ ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸ್ ಇಲಾಖೆ ಫೇಲ್ಯೂರ್ ಆಗಿದೆ ಎಂದು ಕಿಡಿಕಾರಿದ್ದಾರೆ.
ಪೊಲೀಸ್ ಇಲಾಖೆ ಫೇಲ್ಯೂರ್ ಆಗಲು ಲಂಚವೇ ಕಾರಣ. ಪ್ರತಿಯೊಬ್ಬರೂ ಇಲ್ಲಿ ದುಡ್ದುಕೊಟ್ಟೇ ಬರಬೇಕು. ಒಂದು ಕಡೆ ರಾಜ್ಯ ಕಾಂಗ್ರೆಸ್ ಸರ್ಕಾರ ದರೋಡೆ ಮಾಡುತ್ತಿದೆ. ಇನ್ನೊಂದು ಕಡೆ ದರೋಡೆಕೋರರು ದರೋಡೆ ಮಾಡುತ್ತಿದ್ದಾರೆ. ಇದು ಪಿಕ್ ಪಾಕೆಟ್ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
