ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ. ಬೆಳಿಗ್ಗೆಯಷ್ಟೇ 70 ವರ್ಷದ ವೃದ್ಧರೊಬ್ಬರ ಮೇಲೆ ಬಿಎಂಟಿಸಿ ಬಸ್ ಹರಿದು ಹೋಗಿತ್ತು. ಈ ಘಟನೆ ಬೆನ್ನಲ್ಲೇ ಮತ್ತೊಂದು ಅಪಘಾತ ಸಂಭವಿಸಿದ್ದು, ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಗೋವಿಂದರಾಜನಗರದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ 60 ವರ್ಷದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸರ್ವಜ್ಞ ಸ್ಕೂಲ್ ಬಳಿ ಈ ದುರಂತ ಸಂಭವಿಸಿದೆ. ಸುಶೀಲಾ ಮೃತ ಮಹಿಳೆ.
ಬೆಳಿಗ್ಗೆ ಮಡಿವಾಳ ಬಸ್ ನಿಲ್ದಾಣದ ಬಳಿ ಪಾದಚಾರಿ ವೃದ್ಧರೊಬ್ಬರ ಮೇಲೆ ಬಿಎಂಟಿಸಿ ಬಸ್ ಹರಿದಿದ ಪರಿಣಾಮ ಸ್ಥಳದಲ್ಲೇ ವೃದ್ಧ ಸಾವನ್ನಪ್ಪಿದ್ದರು. ಇದೀಗ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮಹಿಳೆ ಬಲಿಯಾಗಿದ್ದಾರೆ.
