BIG NEWS: ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ ಎಂದ ಸಿಎಂ ಸಿದ್ದರಾಮಯ್ಯ

ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ತಿಳಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ಮಾಜಿ ಸಂಸದ ಡಿ.ಕೆ.ಸುರೇಶ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಇಂತಹ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ವರ್ಷ ಆಡಳಿತ ನಡೆಸಲು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರ ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಪುನ: ಕಾಂಗ್ರೆಸ್ ಪಕ್ಷವೇ ಆಯ್ಕೆಯಾಗಿ ಬರಲಿದೆ ಎಂದು ತಿಳಿಸಿದರು.

ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಕೆ ಬಗ್ಗೆ ನಡೆಯುತ್ತಿರುವ ಚರ್ಚೆಗೆ ಉತ್ತರಿಸಿ, ಇದು ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನಾರಚನೆ ಮಾಡಬಹುದು ಎಂದು ತಿಳಿಸಿದ ನಂತರವಷ್ಟೇ, ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು. ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನಾರಚನೆ ಸಂದರ್ಭದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read