HomeLatest NewsGOOD NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ವಿವಿ‍ಧ ಯೋಜನೆಯಡಿ ಸಹಾಯಧನ...

GOOD NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ವಿವಿ‍ಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಎಂಬಂತೆ ‍ಧನಶ್ರೀ ಸೇರಿ ವಿವಿಧ ಯೋಜನೆಗೆ ಸರ್ಕಾರ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು,  2025ರ ಡಿಸೆಂಬರ್‌ 15ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಉದ್ಯೋಗಿನಿ ಯೋಜನೆ : ಮಹಿಳೆಯರು ಅದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ: ಆದಾಯ ಮಿತಿ: ರೂ. 2.00 ಲಕ್ಷಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟಕ ವೆಚ್ಚ : ಕನಿಷ್ಠ ರೂ.1.00 ಲಕ್ಷದಿಂದ ಗರಿಷ್ಠ ರೂ. 3.00 ಲಕ್ಷಗಳು

ಸಹಾಯಧನ : ಶೇ. 50 ರಷ್ಟು

ಸಾಮಾನ್ಯ ವರ್ಗ:

ಆದಾಯ ಮಿತಿ: ರೂ. 1.50 ಲಕ್ಷಗಳು

ಘಟಕ ವೆಚ್ಚ: ಗರಿಷ್ಠ ರೂ.3.00 ಲಕ್ಷಗಳು

ಸಹಾಯಧನ : ಶೇ.30 ರಷ್ಟು

ಚೇತನ ಯೋಜನೆ : ಗಮನಿತ ಮಹಿಳೆಯರಿಗೆ ಅದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ವಯೋಮಿತಿ 18 ವರ್ಷ ಮೇಲ್ಪಟ್ಟು

ಧನಶ್ರೀ ಯೋಜನೆ : ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000/-ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ವಯೋಮಿತಿ 18 ರಿಂದ 60 ವರ್ಷಗಳು.

(ಈ ಯೋಜನೆಯ ಅರ್ಜಿಯನ್ನು ಅನ್‌ಲೈನ್ ಮತ್ತು ಆಫ್‌ಲೈನ್‌ಗಳಲ್ಲಿ ಸಲ್ಲಿಸಬಹುದು)

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ: ಆಹಾರೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. (ಈ ಯೋಜನೆಯ ಅರ್ಜಿಯನ್ನು ಅನ್‌ಲೈನ್ ಮತ್ತು ಆಫ್‌ಲೈನ್‌ಗಳಲ್ಲಿ ಸಲ್ಲಿಸಬಹುದು)

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ

1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ವಿಶೇಷ ಸೂಚನೆ

ಅರ್ಜಿದಾರರು ತಮ್ಮಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು.

ಧನಶ್ರೀ ಯೋಜನೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಅರ್ಜಿದಾರರು ಅರ್ಜಿಯನ್ನು ಅನ್ ಲೈನ್ ಮತ್ತು ಆಫ್ ಲೈನ್ ನಲ್ಲಿ ಸಲ್ಲಿಸಬಹುದು. ಈ ಎರಡು ಯೋಜನೆಗಳಿಗೆ ಅರ್ಜಿಯನ್ನು ಆಫ್ ಲೈನ್ ನಲ್ಲಿ ಸಲ್ಲಿಸುವವರು ನಿಗದಿಪಡಿಸಿದ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿನಿಗಮ ಇವರನ್ನು ಸ೦ಪರ್ಕಿಸಿ ಅರ್ಜಿಸಲ್ಲಿಸುವುದು.

ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent) ಅಮದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಸಹ ಸೇವಾ ಸಿಂಧು ಫೋರ್ಟರ್ ನಲ್ಲಿ ಅರ್ಜಿಸಲ್ಲಿಸುವುದು.

ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು / ಅರ್ಜಿದಾರರು ಮಾನ್ಯ ಸಚಿವರು /ಮಾನ್ಯ ಶಾಸಕರು ಕರ್ನಾಟಕ ಸರ್ಕಾರ /ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ (ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿಸಲ್ಲಿಸುವುದು. ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳನ್ನು ಫಲಾಪೇಕ್ಷಿಗಳು/ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್) ಕೇಂದ್ರಗಳಲ್ಲಿ ಅರ್ಜಿಸಲ್ಲಿಸುವುದು.

ಈ ಹಿಂದಿನ ಸಾಲುಗಳಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-12-2025 ರ ಸಂಜೆ 5:30 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಥವಾ ನಿಗಮದ ವೆಬ್ ಸೈಟ್ (https://kswdc.karnataka.gov.in) ಸಂಪರ್ಕಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular