ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟುರುವುದಾಗಿ ಹೇಳಿದ್ದ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯಕ್ಕೆ ಎಸ್ ಐಟಿ ಅಧಿಕಾರಿಗಳು 3923 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ದೋಷಾರೋಪ ಪಟ್ಟಿ ಹಾಗೂ ಸೆಕ್ಷನ್ 215ರ ಅಡಿಯಲ್ಲಿ ಸುಳ್ಳು ಸಾಕ್ಷ್ಯಗಳನ್ನು ಎಸ್ ಐಟಿ ಅಧಿಕಾರಿಗಳು ಸಲ್ಲಿಕೆ ಮಾಡಿದ್ದಾರೆ.
ಪ್ರಕರಣದ ಆರೋಪಿಗಳಾದ ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್, ಸುಜಾತಾ ಭಟ್ ಸೇರಿದಂತೆ 6 ಜನರ ವಿರುದ್ಧ ಮೊದಲ ಹಂತದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
