ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಮಧ್ಯಾಹ್ನ ನಡೆದಿದ್ದ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳು ಲಭ್ಯವಾಗಿವೆ. ಪ್ರಕರಣ ನಡೆದಾಗಿನಿಂದ ಆರೋಪಿಗಳ ಜಾಡು ಹಿಡಿದು ಹೊರಟಿರುವ ಪೊಲೀಸರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ದರೋಡೆಗೆ ಬಳಸಿದ್ದ ಕಾರು ಚಿತ್ತೂರಿನಲ್ಲಿ ಪತ್ತೆಯಾಗಿದೆ. ಕಾರನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದ ವೇಳೆ ಇಬ್ಬರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಆರೋಪಿಗಳು ಬೆಂಗಳೂರಿನ ಬಾಣವಾಡಿಯ ಕಲ್ಯಾಣ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ.
ತನಿಖೆ ವೇಳೆ ಪೊಲೀಸರಿಗೆ ಬೆಂಗಳೂರಿನ ರಾಬರಿ ಗ್ಯಾಂಗ್ ನಿಂದಲೇ ತನಿಖೆ ನಡೆದಿದೆ ಎಂಬುದು ದೃಢವಾಗಿದೆ. ದರೋಡೆಕೋರರು ಕನ್ನಡ ಮಾತನಾಡುತ್ತಿದ್ದರು ಎಂದು ಸಿಎಂ ಎಸ್ ಕಂಪನಿ ವಾಹನ ಚಾಲಕ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಗ್ಯಾಂಗ್ ನಿಂದಲೇ ಕೃತ್ಯ ನಡೆದಿದೆ ಎನ್ನಲಾಗಿದೆ.
You Might Also Like
TAGGED:ಬೆಂಗಳೂರು
