ಬೆಂಗಳೂರು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ ಒಲಿಯುವ ಸಾಧ್ಯತೆ ದಟ್ಟವಾಗಿದೆ. ಪಕ್ಷ ಸಂಘಟನೆ ನಿಟ್ಟಿನಲ್ಲಿ ಜೆಡಿಎಸ್ ಈ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.
ಜೆಡಿಎಸ್ ರಜತ ಮಹೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಈ ಬಗ್ಗೆ ನಾಳೆ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ. ಪ್ರಸ್ತುತ ಹೆಚ್.ಡಿ.ಕುಮಾರಸ್ವಾಮಿಯವರೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದು, ಅವರು ಕೇಂದ್ರ ಸಚಿವರೂ ಆಗಿರುವುದರಿಂದ ಪಕ್ಷ ಸಂಘಟನಲ್ಲಿ ಗಮನಹರಿಸುವುದು ಕೊಂಚ ಕಷ್ಟಸಾಧ್ಯವಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ನಾಯಕರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ನಾಳೆ ಜೆಡಿಎಸ್ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಈಗಿನಿಂದಲೇ ರಾಜ್ಯಾದ್ಯಂತ ಪಕ್ಷ ಸಂಘಟನೆಯತ್ತ ಆದ್ಯತೆ ನೀಡುತ್ತಿದೆ ಎನ್ನಲಾಗಿದೆ.
