HomeLatest Newsಚಲಿಸುತ್ತಿದ್ದಾಗಲೇ ಬೆಂಕಿ ತಗುಲಿ ಸುಟ್ಟು ಕರಕಲಾದ ಕಾರ್: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಚಲಿಸುತ್ತಿದ್ದಾಗಲೇ ಬೆಂಕಿ ತಗುಲಿ ಸುಟ್ಟು ಕರಕಲಾದ ಕಾರ್: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಉಡುಪಿ: ಚಲಿಸುತ್ತಿದ್ದ ಕಾರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಾವುಂದ ಫ್ಲೈಓವರ್ ಮೇಲೆ ಗುರುವಾರ ನಡೆದಿದೆ.

ಕುಂದಾಪುರದ ಕಟ್ಕೆರೆಯಿಂದ ಕಾರ್ ನಲ್ಲಿ ಉಪ್ಪಂದಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಏಕಾಏಕಿ ಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರು ಚಾಲಕ ನಿತೇಶ್ ಮತ್ತು ಚಂದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಈ ಮಾರ್ಗದ ರಸ್ತೆಯಲ್ಲಿ ದಟ್ಟ ಹೊಗೆ ಆವರಿಸಿ ಕೆಲ ಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಬೈಂದೂರು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular