HomeLatest Newsಋಣಾತ್ಮಕ ಮೌಲ್ಯಮಾಪನದೊಂದಿಗೆ ವಿವಿಧ ಇಲಾಖೆ, ನಿಗಮದ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆ | KEA Recruitments

ಋಣಾತ್ಮಕ ಮೌಲ್ಯಮಾಪನದೊಂದಿಗೆ ವಿವಿಧ ಇಲಾಖೆ, ನಿಗಮದ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆ | KEA Recruitments

ಬೆಂಗಳೂರು: ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಜನವರಿ 10, 11, 12 ಮತ್ತು 25ರಂದು ವಿವಿಧ ಪರೀಕ್ಷೆಗಳು ನಡೆಯಲಿವೆ. ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4 ಅಂಕ ಕಡಿತ ಮಾಡಲಾಗುತ್ತದೆ.

ತಾಂತ್ರಿಕ ಶಿಕ್ಷಣ, ಬಿಡಿಎ, ಕೃಷಿ ಮಾರಾಟ‌, ಬೆಂಗಳೂರು ಜಲಮಂಡಳಿ, ಕೆಕೆಆರ್ ಟಿಸಿ ಇತ್ಯಾದಿ ಇಲಾಖೆ/ನಿಗಮ- ಮಂಡಳಿಗಳ ವಿವಿಧ ದರ್ಜೆಯ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೇ ರೀತಿ ವಿವಿಧ ಇಲಾಖೆ/ನಿಗಮಗಳಲ್ಲಿನ ಹೈದರಾಬಾದ್ ಕರ್ನಾಟಕ ಕೋಟಾದ 391 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು KEA ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಡಿ.20, 21, ಜನವರಿ 24 ಮತ್ತು ಫೆಬ್ರುವರಿ 22ರಂದು ಪರೀಕ್ಷೆಗಳು ನಡೆಯಲಿವೆ. ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4 ಅಂಕ ಕಡಿತ ಮಾಡಲಾಗುತ್ತದೆ.

ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ ಗೆ ಭೇಟಿ ನೀಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular