BREAKING NEWS: ಬೈಕ್ ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಟಿಪ್ಪರ್: ಬೆಂಗಳೂರಲ್ಲಿ ಹದಗೆಟ್ಟ ರಸ್ತೆಗೆ ಮತ್ತೊಂದು ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಹದಗೆಟ್ಟ ರಸ್ತೆಗಳಿಗೆ ಮತ್ತೊಂದು ಬಲಿಯಾಗಿದೆ. ಬೈಕ್ ನಿಂದ ಬಿದ್ದು ಮಹಿಳೆ ಮೃತಪಟ್ಟಿದ್ದಾರೆ.

ಗೋಕಾಕ್ ನ ಶಾಂತಮ್ಮ(46) ಮೃತಪಟ್ಟವರು ಎಂದು ಹೇಳಲಾಗಿದೆ. ಹುಳಿಮಾವು ಸರಸ್ವತಿಪುರಂನಲ್ಲಿ ಸ್ನೇಹಿತೆಯ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಹಾಳಾದ ರಸ್ತೆಯಲ್ಲಿ ಬೈಕ್ ನಲ್ಲಿ ಹೋಗುವಾಗ ದುರಂತ ಸಂಭವಿಸಿದೆ.

ನಿಯಂತ್ರಣ ತಪ್ಪಿ ಬೈಕ್ ನಿಂದ ಶಾಂತಮ್ಮ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಅವರ ಮೇಲೆ ಟಿಪ್ಪರ್ ಹರಿದಿದೆ. ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read