ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಂಡ ಪಾವತಿಗೆ ಮತ್ತೆ ಶೇಕಡ 50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಇಂದಿನಿಂದ ಡಿಸೆಂಬರ್ 12ರವರೆಗೆ ಜಾರಿಯಲ್ಲಿರಲಿದೆ. 3 ದಶಕಗಳ ಹಳೆ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣ ಸಂಬಂಧ ದಂಡ ಪಾವತಿಗೆ ಶೇಕಡ 50ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಇಂದಿನಿಂದ 20 ದಿನಗಳ ಸಮಯ ನೀಡಲಾಗಿದ್ದು, ರಾಜ್ಯದ ಎಲ್ಲಾ ಸಂಚಾರ ಪೊಲೀಸ್ ಠಾಣೆಗಳು, ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್, ಬೆಂಗಳೂರು ಒನ್ ಸೇರಿ ಆನ್ಲೈನ್ ಮೂಲಕವೂ ದಂಡಪಾವತಿಗೆ ಅವಕಾಶ ಕಲ್ಪಿಸಲಾಗಿದೆ.
1991- 92 ರಿಂದ 2019 -20ರ ಅವಧಿಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಈ ಚಲನ್ ನಲ್ಲಿ ದಾಖಲಾಗಿರುವ ನಿಯಮ ಉಲ್ಲಂಘನೆ ಪ್ರಕರಣಗಳ ಕುರಿತು ದಂಡಪಾವತಿಗೆ ಶೇಕಡ 50ರಷ್ಟು ರಿಯಾಯಿತಿ ನೀಡಲಾಗಿದೆ. ನವೆಂಬರ್ 21ರಿಂದ ಡಿಸೆಂಬರ್ 12ರ ವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಸಾರಿಗೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ತಿಳಿಸಿದ್ದಾರೆ.
