HomeLatest NewsBIG NEWS: ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ನಿಯಮ ಜಾರಿಗೆ ಹೈಕೋರ್ಟ್ ಸೂಚನೆ

BIG NEWS: ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ನಿಯಮ ಜಾರಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಮಕ್ಕಳು ಹಿಂಬದಿ ಸವಾರರಾಗಿ ಪ್ರಯಾಣಿಸುವಾಗ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸುವ ಕೇಂದ್ರ ಮೋಟಾರ್ ವಾಹನ ಎರಡನೇ ತಿದ್ದುಪಡಿ ಅಧಿನಿಯಮಗಳು 2022ರ 138(7)ನಿಯಮ ಜಾರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಬಗ್ಗೆ ಶಿವಮೊಗ್ಗದ ಡಾ. ಅರ್ಚನಾ ಭಟ್ ಸಲ್ಲಿಸಿದ ಸಾರ್ವಜನಿಕ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠದಿಂದ ಈ ನಿರ್ದೇಶನ ನೀಡಲಾಗಿದೆ.

ಕೇಂದ್ರ ಮೋಟಾರ್ ವಾಹನ ನಿಯಮಗಳನ್ನು ಜಾರಿಗೆ ತರುವಲ್ಲಿ ರಾಜ್ಯದ ಅಧಿಕಾರಿಗಳು ಅನೇಕ ಕ್ರಮ ಕೈಗೊಂಡಿದ್ದಾರೆ. ಆದರೆ, ವಾಸ್ತವವಾಗಿ ನಿಯಮ ಇನ್ನು ಜಾರಿಯಾಗಿಲ್ಲ. ಹೀಗಾಗಿ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular