ರಾಮನಗರ: ಬುದ್ಧಿಮಾಂಧ್ಯ ಪುತ್ರಿ ಮೇಲೆ ತಂದೆಯೇ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಂದೆಯೇ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದು ಆತನ ಪತ್ನಿ ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿರುವ ಆರೋಪಿ, ಪತ್ನಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುಡಿದು ಬಂದು ಪುತ್ರಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕೆಲಸಕ್ಕೆ ಹೋಗಿದ್ದ ಪತ್ನಿ ಮನೆಗೆ ಬಂದಾಗ ಪುತ್ರಿಯ ಮೇಲೆ ಅತ್ಯಾಚಾರ ಎಸಗಿರುವುದನ್ನು ಕಂಡು ದೂರು ನೀಡಿದ್ದಾರೆ. ಅಕ್ಕೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಜರುಗಿಸಿದ್ದಾರೆ.
