ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಬ್ಬು ಕಟಾವು ಯಂತ್ರಕ್ಕೆ ಮಹಿಳೆ ಮೃತಪಟ್ಟಿದ್ದಾರೆ. ಶೋಭಾ ಶ್ರೀಕಾಂತ ಸಂಕ್ರಟ್ಟಿ(54) ಮೃತಪಟ್ಟವರು.
ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಜಮೀನಿನಲ್ಲಿ ಗುರುವಾರ ಕಬ್ಬು ಕತ್ತರಿಸುವ ಬೃಹತ್ ಯಂತ್ರಕ್ಕೆ ಸಿಲುಕಿ ಶೋಭಾ ಮೃತಪಟ್ಟಿದ್ದಾರೆ. ತಮ್ಮ ಜಮೀನಿನಲ್ಲಿ ಕಟಾವು ಆಗಿ ಬೀಳುತ್ತಿದ್ದ ಕಬ್ಬುಗಳನ್ನು ಆರಿಸುವಾಗ ಆಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಅಥಣಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
