ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 30 ವರ್ಷದ ವ್ಯಕ್ತಿಗೆ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ(ಎಫ್.ಟಿ.ಎಸ್.ಸಿ.1 ಕೋರ್ಟ್) 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.
ಭದ್ರಾವತಿ ಹಳೆನಗರ ಪೊಲೀಸ್ ಠಾಣೆ ವ್ಯಾಪ್ತಿಯ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 30 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 65 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
2022 ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆಗಿನ ತನಿಖಾಧಿಕಾರಿ ರಾಘವೇಂದ್ರ ಕಾಂಡಿಕೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಿಂಗನಗೌಡ ಪಾಟೀಲ್ ಅವರು ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 65,000 ರೂ. ದಂಡ ವಿಧಿಸಿದ್ದಾರೆ. ನೊಂದ ಬಾಲಕಿಗೆ ಸರ್ಕಾರದ ನೆರವು 4.50 ಲಕ್ಷ ರೂ. ನೀಡುವಂತೆ ತೀರ್ಪು ನೀಡಲಾಗಿದೆ. ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.
