ನವದೆಹಲಿ: ಶಿಕ್ಷಕರ ಕಿರುಕುಳ, ನಿಂದನೆಗೆ ಬೇಸತ್ತ 10 ನೇ ತರಗತಿ ವಿದ್ಯಾರ್ಥಿ ದೆಹಲಿ ಮೆಟ್ರೋ ಸ್ಟೇಷನ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ನಾಲ್ವರು ಶಿಕ್ಷಕರನ್ನು ಅಸ್ಪೆಂಡ್ ಮಾಡಲಾಗಿದೆ.
ವಿದ್ಯಾರ್ಥಿ ಆತ್ಮಹತ್ಯೆ ಬೆನ್ನಲ್ಲೇ ಸಾರ್ವಜನಿಕರು ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಈ ಬೆಳವಣಿಗೆ ಬಳಿಕ ನಾಲ್ವರು ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ವಿದ್ಯಾರ್ಥಿಗೆ ಕಳೆದ ಒಂದು ವರ್ಷದಿಂದ ಶಿಕ್ಷಕರು ಕಿರುಕುಳ ನೀಡುವುದು, ನಿಂದಿಸುವುದು ಮಾಡುತ್ತಿದ್ದರು. ಇದರಿಂದ ಖಿನ್ನತೆಗೆ ಒಳಗಾದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಾಲೆಯ ಸಲಹಾ ಮಂಡಳಿ ವಿದ್ಯಾರ್ಥಿ ಆತ್ಮಹತ್ಯೆಗೆ ಕಾರಣರಾದ ನಾಲ್ವರು ಶಿಕ್ಷಕರನ್ನು ಅಮಾನತುಗೊಳಿಸಿದೆ. ಅಲ್ಲದೇ ಎಫ್ ಐ ಆರ್ ದಾಖಲಿಸಲಾಗುವುದು ಎಂದು ತಿಳಿಸಿದೆ.
