ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಈ ಕಚೇರಿಗೆ ಹೊರಗುತ್ತಿಗೆ ಆಧಾರದಲ್ಲಿ ಓರ್ವ ಮಾಜಿ ಸೈನಿಕರನ್ನು ಲಿಪಿಕ ಸಿಬ್ಬಂದಿಯಾಗಿ ಲಿಖಿತ ಪರೀಕ್ಷೆಯ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ನೇಮಕಾತಿಯು ಸಂಪೂರ್ಣ ತಾತ್ಕಾಲಿಕವಾಗಿದ್ದು, 60 ವರ್ಷಗಳ ವಯೋಮಿತಿ ಮೀರದ ಮಾಜಿ ಸೈನಿಕರಿಗೆ ಮೀಸಲಾಗಿರುತ್ತದೆ. ಈ ನೇಮಕಾತಿಯು ಸರ್ಕಾರದ ಖಾಯಂ ಹುದ್ದೆಗೆ ಸಮನಾಗಿರುವುದಿಲ್ಲ ಮತ್ತು ಸೇವಾ ಖಾಯಮಾತಿಗೆ ಅವಕಾಶವಿರುವುದಿಲ್ಲ. ಸೇನಾಸೇವೆಯ ನಿವೃತ್ತಿ ನಂತರ ಕೇಂದ್ರ/ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಲಿಪಿಕ ನೌಕರರಾಗಿ ಖಾಯಂ/ಹಂಗಾಮಿಯಾಗಿ ಕಾರ್ಯ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಕನ್ನಡ, ಹಿಂದಿ ಮತ್ತು ಆಂಗ್ಲಭಾಷೆಗಳಲ್ಲಿ ಸಂವಹನವು (ಬರೆಯಲು, ಓದಲು ಮತ್ತು ಮಾತನಾಡಲು) ಮತ್ತು ಗಣಕ ಯಂತ್ರದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಪ್ರಾವೀಣ್ಯತೆಯು ಅತ್ಯಗತ್ಯವಾಗಿರುತ್ತದೆ.
ಆಸಕ್ತರು ದಿನಾಂಕ 05.12.2025 ರ ಸಂಜೆ 5.00 ಗಂಟೆಯ ಒಳಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಪೂರ್ಣ ಸ್ವವಿವರಗಳೊಂದಿಗೆ ತಮ್ಮ ಸ್ವಹಸ್ತಾಕ್ಷರದಲ್ಲಿ ಅರ್ಜಿಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08182220925 ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ(ಪ್ರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.
