ಬೆಂಗಳೂರು : ಸದಾ ಒಂದಲ್ಲೊಂದು ವಿವಾದಗಳ ಮೂಲಕ ಸುದ್ದಿಯಾಗುತ್ತಿರುವ ಬಿಗ್ ಬಾಸ್-12 ಇದೀಗ ಮತ್ತೊಂದು ವಿವಾದಕ್ಕೆ ಗುರಿಯಾಗಿದೆ. ನಟ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ಬೆನ್ನಲ್ಲೇ ನಟ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ .
ಕಳೆದ ವೀಕೆಂಡ್ ನಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ಸುದೀಪ್ ಗರಂ ಆಗಿದ್ದರು. ನನ್ನ ಪಿತ್ತ ನೆತ್ತಿಗೇರುತ್ತಲ್ಲ ಅದಕ್ಕಿಂತ ಮೊದಲು ಅಂತ ಬೈದಿದ್ರು, ಇದು ಮಹಿಳೆಗೆ ಮಾಡಿದ ಅವಮಾನ ಎಂದು ಸಂಧ್ಯಾ ಪವಿತ್ರ ದೂರು ನೀಡಿದ್ದಾರೆ. ಸಂಧ್ಯಾ ದೂರು ನೀಡುತ್ತಿದ್ದಂತೆ ಅಭಿಮಾನಿಗಳು ಧಮ್ಕಿ ಹಾಕುತ್ತಿದ್ದಾರೆ ಎಂದು ಸಂಧ್ಯಾ ಅಳಲು ತೋಡಿಕೊಂಡಿದ್ದಾರೆ.
ಸಂಧ್ಯಾ ಪವಿತ್ರ ಎಂಬುವವರು ಆಯೋಗಕ್ಕೆ ದೂರು ನೀಡಿದ್ದು, ಹಾಗೂ ಬಿಡದಿ ಪೊಲೀಸ್ ಠಾಣೆಗೂ ದೂರು ನೀಡಿದ್ದಾರೆ.
ಗಿಲ್ಲಿ ನಟನ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು
ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.ಬಿಗ್ ಬಾಸ್ ಸ್ಪರ್ಧೆ ವೇಳೆ ರಿಷಾ ಬಟ್ಟೆಗಳನ್ನು ವಾಷ್ ರೂಂ ನಲ್ಲಿ ಇಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಗಿಲ್ಲಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಅಲ್ಲದೇ ಗಿಲ್ಲಿ ಮಹಿಳೆಯರ ಬಗ್ಗೆ ಅವಮಾನಕರವಾಗಿ ಮಾತನಾಡಿದ್ದಾರೆ ಎಂದು ದೂರಲಾಗಿದೆ.
ದೂರಿನ ಹಿನ್ನೆಲೆಯಲ್ಲಿ ಮಹಿಳಾ ಆಯೋಗ ವಿಡಿಯೋ ಫುಟೇಜ್ ಪರಿಶೀಲನೆ ಮಾಡ್ದ್ದು, ಮೇಲ್ನೋಟಕ್ಕೆ ಗಿಲ್ಲಿ ನಟ ತಪ್ಪಾಗಿ ನಡೆದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಸಿಗದ ಕಾರಣಕ್ಕೆ ಪ್ರಕರಣವನ್ನು ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.
