ಉಡುಪಿ : ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನ ರೋಹಿತ್ ಮತ್ತು ಸಂತ್ರಿ ಎಂದು ಗುರುತಿಸಲಾಗಿದೆ.
ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತರನ್ನ ರೋಹಿತ್ ಮತ್ತು ಸಂತ್ರಿ ಎಂದು ಗುರುತಿಸಲಾಗಿದೆ. ಆರೋಪಿಗಳು ಶತೃದೇಷ ಪಾಕಿಸ್ತಾನಕ್ಕೆ ಕೆಲವು ರಹಸ್ಯ ಮಾಹಿತಿಗಳನ್ನ ರವಾನಿಸುತ್ತಿದ್ದರು. ಹಣಕ್ಕಾಗಿ ದೇಶದ್ರೋಹ ಚಟುವಟಿಕೆ ನಡೆಸುತ್ತಿದ್ದರು.
ಕಳೆದ ಒಂದೂವರೆ ವರ್ಷದಿಂದ ಆರೋಪಿಗಳು ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನ ವಾಟ್ಸಾಪ್ ಮೂಲಕ ಪಾಕಿಸ್ತಾನಕ್ಕೆ ರವಾನೆ ಮಾಡುತ್ತಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಸದ್ಯ ಇಬ್ಬರು ಆರೋಪಿಗಳನ್ನ ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

