ಮೈಸೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಜೋರು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ನಾನೇ ಬಜೆಟ್ ಮಂಡಿಸುತ್ತೇನೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಅದಕ್ಕೆ ನಾನು ಬದ್ಧ’ ಎಂದರು.
‘ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ. ಎಲ್ಲವನ್ನ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ನಾಳೆ ಮಲ್ಲಿಕಾರ್ಜುನ ಖರ್ಗೆ ಅವರೇ ಬೆಂಗಳೂರಿಗೆ ಬರಲಿದ್ದಾರೆ. ಅವರ ಜೊತೆ ನಾನು ಮಾತನಾಡುತ್ತೇನೆ’ ಎಂದಿದ್ದಾರೆ.
