ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಕೈದಿಗಳ ಮೋಜು-ಮಸ್ತಿ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆಪ್ತ ಧನ್ವೀರ್ ಇಂದು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದ ನಟ ಧನ್ವೀರ್ ಗೆ ಪೊಲೀಸರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ ಎಂದು ತಿಳಿದುಬಂದಿದೆ. ನಟ ಧನ್ವೀರ್, ತನ್ನ ವಕೀಲರ ಜೊತೆ ವಿಚಾರಣೆಗೆ ಹಾಜರಾಗಿದ್ದರು.
ವಿಚಾರಣೆ ಬಳಿಕ ಧನ್ವೀರ್ ಗೆ ಮತ್ತೆ ಮುಂದಿನ ವಾರವೂ ವಿಚಾರಣೆಗೆ ಬರುವಂತೆ ಪೊಲೀಸರು ಸೂಚಿಸಿದ್ದಾರೆ.
