ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಏಕಾಏಕಿ ಭೇಟಿ ನೀಡಿರುವ ಘಟನೆ ನಡೆದಿದೆ.
ಸಚಿವ ಸಂಪುಟ ಪುನಾರಚನೆ ಚರ್ಚೆ ಬೆನ್ನಲ್ಲೇ ಕೆಲ ಸಚಿವರು, ಶಾಸಕರು ದೆಹಲಿಗೆ ದೌಡಾಯಿಸಿರುವ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಇತ್ತ ಕೆಲ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಶಾಸಕ ವಿನಯ್ ಕುಲಕರ್ಣಿ ಹಾಗೂ ಶಾಸಕ ವೀರೇಂದ್ರ ಪಪ್ಪಿ ಜೊತೆ ಮಾತುಕತೆ ನಡೆಸಿದ್ದಾರೆ.
ಧಾರವಾಡದ ಶಾಸಕ ವಿನಯ್ ಕುಲಕರ್ಣಿ ಕೊಲೆ ಪ್ರಕರಣದಲ್ಲಿ ಹಾಗೂ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಕೆಶಿ ಬಣದ ಕೆಲ ನಾಯಕರು ಡಿನ್ನರ್ ಸಭೆ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಇಬ್ಬರು ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
