HomeLatest Newsಐಷಾರಾಮಿ ಕಾರ್ ಅಕ್ರಮ ನೋಂದಣಿ: RTO ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಐಷಾರಾಮಿ ಕಾರ್ ಅಕ್ರಮ ನೋಂದಣಿ: RTO ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಉಡುಪಿ: ವಿದೇಶದಿಂದ ಆಮದು ಮಾಡಿಕೊಂಡ ಐಷಾರಾಮಿ ಮರ್ಸಿಡೆಸ್ ಬೆಂಜ್ ಕಾರ್ ಅನ್ನು ಅಕ್ರಮವಾಗಿ ನೋಂದಣಿ ಮಾಡುವ ಮೂಲಕ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ನಷ್ಟ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಲೋಕಾಯುಕ್ತ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಕುರಿತಾಗಿ ಮಾಧ್ಯಮಗಳಲ್ಲಿ ಬಂದ ವರದಿ ಆಧಾರದಲ್ಲಿ ಮಾಹಿತಿ ಕಲೆ ಹಾಕಿದ ಲೋಕಾಯುಕ್ತ ಪೊಲೀಸರು ಸಂಬಂಧಿಸಿದ ದಾಖಲಾತಿ ಪಡೆದು ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ದಾಖಲೆಗಳ ಪರಿಶೀಲಿಸಿದ್ದಾರೆ. ತನಿಖೆಯ ವೇಳೆ ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ಮರ್ಸಿಡೆಸ್ ಬೆಂಜ್ ಕಾರ್ ನ ಮೂಲ ಮಾಡೆಲ್  ಮಾಹಿತಿಯನ್ನು ಬದಲಾವಣೆ ಮಾಡಿ ಅದೇ ಕಂಪನಿಯ ಕಡಿಮೆ ಬೆಲೆಯ ಕಾರ್ ನ ಮಾಡೆಲ್ ಎಂದು ದಾಖಲೆಗಳಲ್ಲಿ ತಿದ್ದುಪಡಿ ಮಾಡಿರುವುದು ಬೆಳಕಿಗೆ ಬಂದಿದೆ.

ಈ ಮೂಲಕ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿಗೆ ನಷ್ಟ ಉಂಟು ಮಾಡಿರುವುದು ಪ್ರಾಥಮಿಕ ವಿಚಾರಣೆಯ ವೇಳೆ ಕಂಡು ಬಂದ ಹಿನ್ನೆಲೆಯಲ್ಲಿ ತನಿಖೆ ಕೈಗೊಳ್ಳಲಾಗಿದೆ. ಉಡುಪಿ ಮತ್ತು ಮಂಗಳೂರು ಸಾರಿಗೆ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲಿನ ಆರೋಪ ದೃಢಪಟ್ಟಿದ್ದು, ಮೇಲಾಧಿಕಾರಿಗಳ ಅನುಮತಿ ಪಡೆದು ನವೆಂಬರ್ 17ರಂದು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular