HomeLatest NewsSHOCKING : ರಾಜ್ಯದಲ್ಲಿ ಘೋರ ಘಟನೆ : ಬಾವಿಗೆ ಹಾರಿ ಇಬ್ಬರು ಮಕ್ಕಳು ಸೇರಿ ಒಂದೇ...

SHOCKING : ರಾಜ್ಯದಲ್ಲಿ ಘೋರ ಘಟನೆ : ಬಾವಿಗೆ ಹಾರಿ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ.!

ಧಾರವಾಡ : ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಚಿಕ್ಕ ಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ.

ನಾರಾಯಣ ಶಿಂಧೆ ಎಂಬುವವರು ತನ್ನ ತಂದೆ ವಿಠ್ಠಲ ಶಿಂಧೆ, ಮಕ್ಕಳಾದ ಶಿವಕುಮಾರ್ ಶಿಂಧೆ ಹಾಗೂ ಶ್ರೀನಿಧಿ ಶಿಂಧೆ ಜೊತೆ ಗ್ರಾಮದ ಹೊರವಲಯದಲ್ಲಿರುವ ಯಲ್ಲಮನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಗ ಶಶಿಕುಮಾರ್ 6 ನೇ ತರಗತಿಯಲ್ಲಿ ಓದುತ್ತಿದ್ದರು. ಮಗಳು ಶ್ರೀನಿಧಿ 5 ನೇ ತರಗತಿ ಓದುತ್ತಿದ್ದಳು. ಶಾಲಾ ಸಮವಸ್ತ್ರದಲ್ಲೇ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂಚ ಕೂಡ ಕರುಣೆ ಇಲ್ಲದೇ ತನ್ನ ತಂದೆಯ ಜೊತೆ ಸೂಸೈಡ್ ಮಾಡಿಕೊಂಡಿದ್ದಾರೆ. ಒಂದೇ ಒಟ್ಟಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದು. ಘಟನೆಗೆ ಇಡೀ ಊರಿಗೆ ಊರು ಮರುಕ ವ್ಯಕ್ತಪಡಿಸಿದೆ.

ಮೇಲ್ನೋಟಕ್ಕೆ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular