ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಅಳವಡಿಸಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1695 ಹುದ್ದೆಗಳ ನೇಮಕಾತಿಗೆ ಹೊರಡಿಸಿದ್ದ ಅಧಿಸೂಚನೆಗಳನ್ನು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ರದ್ದುಪಡಿಸಿದೆ.
ಕೃಷಿ ಇಲಾಖೆಯಲ್ಲಿ ಹೈದರಾಬಾದ್ ಕರ್ನಾಟಕ ವೃಂದ ಮತ್ತು ಉಳಿಕೆ ಮೂಲ ವೃಂದದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ 945 ಹುದ್ದೆಗಳು, ಭೂಮಾಪನ ಮತ್ತು ಕಂದಾಯ ವ್ಯವಸ್ಥೆ ಭೂದಾಖಲೆಗಳ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ 750 ಭೂಮಾಪಕರು ಹುದ್ದೆಗಳ ನೇಮಕಾತಿಗೆ ವಿವಿಧ ದಿನಾಂಕಗಳನ್ನು ಹೋರಾಡಿಸಲಾಗಿದ್ದ ಅಧಿಸೂಚನೆಗಳನ್ನು ರದ್ದುಪಡಿಸಲಾಗಿದೆ.
ಸರ್ಕಾರ ಹೊರಡಿಸಿರುವ ಸುತ್ತೋಲೆಯಂತೆ ಒಳ ಮೀಸಲಾತಿ ಅಳವಡಿಸಿಕೊಂಡು ಹೊಸ ಅಧಿಸೂಚನೆ ಹೊರಡಿಸಲಾಗುವುದು ಎಂದು ಕೆಪಿಎಸ್ಸಿ ತಿಳಿಸಿದೆ.
