HomeLatest NewsRAIN ALERT: ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಮುನ್ಸೂಚನೆ

RAIN ALERT: ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದ ಜೊತೆಗೆ ಚಳಿಯ ಪ್ರಮಾಣ ಹೆಚ್ಚಾಗಿದೆ. ಈ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ನಿನ್ನೆ ಸಾಧಾರಣ ಮಳೆಯಾಗಿತ್ತು. ಇಂದು ಮುಂಜಾನೆಯಿಂದಲೇ ತುಂತುರು ಮಳೆ ಶುರುವಾಗಿದೆ. ಚಳಿ, ಶೀತ ಗಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ, ಗದಗ, ಧಾರವಾಡ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಹಾಗೂ ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular