ಶಿವಮೊಗ್ಗ: ಶಿವಮೊಗ್ಗದ ತುಂಗಾನದಿ ದಡದಲ್ಲಿ ಪ್ರಾಯೋಗಿಕ ಸ್ಫೋಟ ಹಾಗೂ ಹಿಂದೂ ಯುವಕನಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಉಗ್ರರಿಗೆ ಎನ್ ಐಎ ವಿಶೇಶ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಐಸಿಸ್ ಉಗ್ರ ಸಂಘಟನೆಯ ಇಬ್ಬರು ಉಗ್ರರಿಗೆ ಎನ್ ಐಎ ಕೋರ್ಟ್ 6 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ. ಶಿವಮೊಗ್ಗ ಮೂಲದ ಜಬೀವುಲ್ಲಾ ಹಾಗೂ ನದಿಂ ಫೈಜಲ್ ಶಿಕ್ಷೆಗೆ ಒಳಗಾದ ಅಪರಾಧಿಗಳು. ಆರೋಪಿಗಳಿಗೆ ತಲಾ 59,000 ದಂಡವನ್ನೂ ವಿಧಿಸಲಾಗಿದೆ.
ನಾಲ್ಕು ವರ್ಷಗಳ ಹಿಂದೆ ಆರೋಪಿಗಳು ತುಂಗಾನದಿ ದಡದಲ್ಲಿ ಪ್ರಾಯೋಗಿಕ ಸ್ಫೋಟ ನಡೆಸಿದ್ದರು. 2022ರ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ರಾಅಜಸ್ಥಾನ ಮೂಲದ ಹಿಂದೂ ಯುವಕ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿದಿದ್ದರು. ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು. ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.
