HomeLatest NewsBIG NEWS: ಫ್ಲೈ ಓವರ್ ಮೇಲೆ ಸರಣಿ ಅಪಘಾತ: ನಾಲ್ವರು ಸ್ಥಳದಲ್ಲಿಯೇ ಸಾವು

BIG NEWS: ಫ್ಲೈ ಓವರ್ ಮೇಲೆ ಸರಣಿ ಅಪಘಾತ: ನಾಲ್ವರು ಸ್ಥಳದಲ್ಲಿಯೇ ಸಾವು

ಥಾಣೆ: ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್ ನಾಥ್ ಪಟ್ಟಣದ ಫ್ಲೈ ಓವರ್ ಮೇಲೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಹಲವು ಬೈಕ್ ಗಳಿಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ ಸವಾರನೊಬ್ಬ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular