BREAKING : ಬೆಂಗಳೂರಲ್ಲಿ 7 ಕೋಟಿ ದರೋಡೆ ಪ್ರಕರಣದ ಎಲ್ಲಾ ಆರೋಪಿಗಳು ಅರೆಸ್ಟ್ ,ಇದುವರೆಗೆ 6 ಕೋಟಿ 70 ಲಕ್ಷ ಹಣ ವಶಕ್ಕೆ.!

ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಸಿಎಂಎಸ್ ಸಿಬ್ಬಂದಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಮೂಲಕ ಬಹುತೇಕ ಎಲ್ಲಾ ಆರೋಪಿಗಳ ಬಂಧನವಾಗಿದೆ ಎನ್ನಲಾಗಿದೆ.

ಗೋಪಿ ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಮೂಲಕ ಎಲ್ಲಾ ಆರೋಪಿಗಳ ಬಂಧನವಾಗಿದೆ. ಕಳ್ಳತನವಾಗಿದ್ದ 11  ಕೋಟಿ ಪೈಕಿ 6 ಕೋಟಿ 70 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ಹಣವನ್ನ ಪೊಲೀಸರು ಸದ್ಯದಲ್ಲೇ ವಶಪಡಿಸಿಕೊಳ್ಳಲಿದ್ದಾರೆ.

ಬೆಂಗಳೂರಿನ ನಿವಾಸಿಯಾದ ಮತ್ತೋರ್ವ ಆರೋಪಿ ಜೆ.ಎಕ್ಸ್ ವಿಯರ್ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದನು. ಪೊಲೀಸರು ಆತನನ್ನ ಕೂಡ ಕಾರ್ಯಾಚರಣೆ ನಡೆಸಿ ಬಂಧಿಸಿ ತಮಿಳುನಾಡಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಈತನನ್ನ ಬಂಧಿಸಿ ಪೊಲೀಸರು ಸಿದ್ದಾಪುರ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಕುಪ್ಪಂ ನಲ್ಲಿ ಇನೋವಾ ಕಾರು ನಿಲ್ಲಿಸಿ ಬಾಕ್ಸ್ ಒಡೆದು ಹಣದ ಸಮೇತ ವ್ಯಾಗನರ್ ಕಾರಿನಲ್ಲಿ ಪರಾರಿಯಾಗಿದ್ದನು. ಕಾಡುಗೊಂಡನಹಳ್ಳಿ ನಿವಾಸಿಯಾದ ಜೆ.ಎಕ್ಸ್ ವಿಯರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಲ್ಲಿ 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಪೊಲೀಸ್ ಕಾನ್ ಸ್ಟೇಬಲ್ ಅಣ್ಣಪ್ಪ ಹಾಗೂ ಸಿಎಂಎಸ್ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದರು. ಇದರ ಜೊತೆಗೆ 5. 30 ಕೋಟಿ ಹಣವನ್ನು ಕೂಡ ಪೊಲೀಸರು ವಶಕ್ಕೆ ಪಡಿಸಿಕೊಂಡಿದ್ದರು. ಇದೀಗ ಎಲ್ಲಾ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ರಾಬರಿ ಕೇಸ್ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬುವವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದರು. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್ ಮೈಂಡ್ ಎನ್ನಲಾಗಿದ್ದು, ಈತನ ಬಂಧನದ ಬೆನ್ನಲ್ಲೇ ಎಲ್ಲರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read