ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ರಾಬರಿ ನಡೆದಿದ್ದು, ದುಷ್ಕರ್ಮಿಗಳು ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ಕೋಟ್ಯಾಂತರ ಮೌಲ್ಯದ ನಗನಾಣ್ಯ ದೋಚಿ ಪರಾರಿಯಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಬೆಂಗಳೂರಲ್ಲಿ 7 ಕೋಟಿ ದರೋಡೆ ಪ್ರಕರಣ ಮಾಸುವ ಮುನ್ನವೇ ಈ ದರೋಡೆ ನಡೆದಿದೆ. ಬಂಡೀಪುರದ ಅರಣ್ಯದ ರಸ್ತೆಯಲ್ಲಿ ಹೋಗುತ್ತಿದ್ದ ಚಿನ್ನದ ವ್ಯಾಪಾರಿಯನ್ನ ಅಡ್ಡಗಟ್ಟಿದ ದುಷ್ಕರ್ಮಿಗಳು ನಗನಾಣ್ಯ ದೋಚಿ ಪರಾರಿಯಾಗಿದ್ದಾರೆ. ಮೂಲೆ ಹೊಳೆ ಮೂಲಕ ಕೇರಳಕ್ಕೆ ಹೊರಟಿದ್ದ ಚಿನ್ನದ ವ್ಯಾಪಾರಿಯನ್ನು ಹಿಂಬಾಲಿಸಿ ಗ್ಯಾಂಗ್ ದರೋಡೆ ಮಾಡಿದೆ.
ಸದ್ಯ ವ್ಯಾಪಾರಿ ಗುಂಡ್ಲುಪೇಟೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಚೆಕ್ ಪೋಸ್ಟ್ ಬಳಿಯ ಸಿಸಿ ಕ್ಯಾಮೆರಾ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ದುಷ್ಕರ್ಮಿಗಳು ಎಟಿಎಂ ವಾಹನ ಅಡ್ಡಗಟ್ಟಿ ಬರೋಬ್ಬರಿ 7.11 ಕೋಟಿ ಹಣ ದೋಚಿ ಪರಾರಿಯಾಗಿದ್ದರು. ಈ ಪ್ರಕರಣದ ಆರೋಪಿಗಳನ್ನ ಪೊಲೀಸರು ಬಂಧಿಸುತ್ತಿರುವ ಬೆನ್ನಲ್ಲೇ ಮತ್ತೊಂದು ದರೋಡೆ ನಡೆದಿದೆ
