ಬೆಂಗಳೂರು : ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ-2025 ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು.
ಈ ಕುರಿತು ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ನಿನ್ನೆಯಿಂದ ಆಯೋಜಿಸಿರುವ ಮೂರು ದಿನಗಳ ಈ ಕಾರ್ಯಕ್ರಮವು ಹಲವು ವಿಶೇಷತೆಗಳಿಂದ ಕೂಡಿದೆ.
ಮೌಲ್ಯವರ್ಧಿತ ಮೀನಿನ ಉತ್ಪನ್ನಗಳ ತಯಾರಿ, ಮಾರಾಟ, ರಫ್ತು ಮಾಡುವ ಉದ್ದೇಶದಿಂದ ಜನರಿಗೆ ಮೀನಿನ ವಿಶೇಷ ತಿಂಡಿಗಳನ್ನು ಈ ಸಲದ ಮತ್ಸ್ಯಮೇಳದಲ್ಲಿ ಪರಿಚಯಿಸಲಾಗಿದೆ.ರಾಜ್ಯ ಮೀನುಗಾರಿಕೆ ಇಲಾಖೆಗೆ ಸಂಬಂಧಿಸಿದ ಮಳಿಗೆ ಹತ್ತು ಹಲವು ಮಾಹಿತಿಗಳನ್ನು ತಿಳಿಸಿಕೊಡುತ್ತಿದೆ. ಇಲ್ಲಿ ಯೋಜನೆಗಳು ಅನುಷ್ಠಾನಗೊಂಡಿರುವ ಬಗ್ಗೆಯೂ ವಿಸ್ತೃತ ಮಾಹಿತಿ ಸಿಗಲಿದ್ದು, ಜೊತೆಗೆ ಗಮನ ಸೆಳೆಯುವಂತಹ ಮೀನುಗಾರಿಕೆಯಲ್ಲಿ ಬಳಸುವ ಸಾಧನಗಳನ್ನು ಮಳಿಗೆಯಲ್ಲಿ ವೀಕ್ಷಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
