ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರೇಮ್ ಅಲಿಯಾಸ್ ವೈಷ್ಣವ್ ಬಂಧಿತ ಆರೋಪಿ. ಆರೋಪಿಯಿಂದ 6,700 ತ್ಯಾಪೆನ್ಡನಾಲ್ ಮಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಒಂದು ಮಾತ್ರೆಯನ್ನು 200-500 ರೂಪಾಯಿಗಳಿಗೆ ಕಾಲೇಜು ವಿದ್ಯಾರ್ಥಿಗಳಿಗೆ ಮಾರುತ್ತಿದ್ದ. ಈ ಮಾತ್ರೆ ಮತ್ತು ಬರಿಸುತ್ತದೆ ಎಂದು ತಿಳಿದುಬಂದಿದೆ.
ಬೇರೆ ರಾಜ್ಯಗಳಿಂದ ಆರೋಪಿ ಈ ಮಾತ್ರೆಗಳನ್ನು ತರಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
