ಹುಬ್ಬಳ್ಳಿ: ಹೂಡಿಕೆದಾರರಿಗೆ 23 ಕೋಟಿ ವಂಚನೆ ಮಾಡಿ ಪರಾರಿಯಾಗಿದ್ದ ದಂಪತಿಯನ್ನು ಹುಬ್ಬಳ್ಳಿ-ಧಾರವಾಡ ಬೈಪಾಸ್ ಮಾರ್ಗದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸತೀಶ್ ವುಪ್ಪಲಪಾಟಿ ಹಾಗೂ ಪತ್ನಿ ಶಿಲ್ಪಾ ಬಂಡಾ ಬಂಧಿತ ದಂಪತಿಗಳು. ಆರೋಪಿಗಳಿಬ್ಬರೂ ಹೈದರಾಬಾದ್ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದರು. ಹುಬ್ಬಳ್ಳಿ-ಧಾರಾವಾಡ ಬೈಪಾಸ್ ಮಾರ್ಗವಾಗಿ ಕಾರಿನಲ್ಲಿ ಹೋಗುತ್ತಿದ್ದ ದಂಪತಿಯನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.
ಇಬ್ಬರನ್ನೂ ಹೈದರಾಬಾದ್ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ದಂಪತಿ ಹೈದರಾಬಾದ್ ಮೂಲದವರಾಗಿದ್ದು, ಹೈದರಾಬಾದ್ ಸೆಂಟ್ರಲ್ ಕ್ರೈಂ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.
