HomeLatest Newsಜನಸಾಮಾನ್ಯರಿಗೆ ಬಿಗ್ ಶಾಕ್: ಗಗನಕ್ಕೇರಿದ ತರಕಾರಿ ಬೆಲೆ, ದರ ಕೇಳಿದ ಗ್ರಾಹಕರು ಕಂಗಾಲು

ಜನಸಾಮಾನ್ಯರಿಗೆ ಬಿಗ್ ಶಾಕ್: ಗಗನಕ್ಕೇರಿದ ತರಕಾರಿ ಬೆಲೆ, ದರ ಕೇಳಿದ ಗ್ರಾಹಕರು ಕಂಗಾಲು

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತರಕಾರಿ ದರ ಕೂಡ ಏರಿಕೆಯಾಗಿದೆ.

ಮಾರುಕಟ್ಟೆಯಲ್ಲಿ ಸೊಪ್ಪು, ತರಕಾರಿಗಳ ತದ ತೀವ್ರ ಏರಿಕೆ ಆಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಮುಂಗಾರಿನಲ್ಲಿ ತರಕಾರಿ ಬೆಳೆ ಹೆಚ್ಚಾಗಿದ್ದು, ದರ ಸಾಮಾನ್ಯವಾಗಿತ್ತು. ಈಗ ಮುಂಗಾರು ಮುಕ್ತಾಯವಾಗಿದ್ದು, ಹಿಂಗಾರು ಮಳೆಯ ವಿಳಂಬದಿಂದಾಗಿ ಕಡಿಮೆ ಇಳುವರಿ ಹಾಗೂ ಬೆಳೆಗಳಿಗೆ ರೋಗ ಕಾರಣ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆಯಾಗದ ಕಾರಣ ಬೆಲೆ ಗಗನಕ್ಕೇರಿದೆ.

ದಂಟು ಕಟ್ಟಿಗೆ 30 ರಿಂದ 40 ರೂ., ಪಾಲಕ್, ಮೆಂತೆ ಸೊಪ್ಪು 30 ರಿಂದ 40 ರೂ.ಗೆ ಏರಿಕೆಯಾಗಿದೆ. ಕೊತ್ತಂಬರಿ ದರ ಕೂಡ ಏರಿಕೆಯಾಗಿದೆ. ಆಲೂಗಡ್ಡೆ ಕೆಜಿಗೆ 40 ರೂ., ಹಿರೇಕಾಯಿ ಕೆಜಿಗೆ 80 ರೂ., ಬದನೆಕಾಯಿ 80 ರೂ., ಮೂಲಂಗಿ 60 ರೂ., ಕ್ಯಾರೆಟ್ 60 ರೂ., ಹಸಿ ಮೆಣಸಿನ ಕಾಯಿ, ಟೊಮೆಟೊ ದರ ಕೂಡ ಏರಿಕೆಯಾಗಿದೆ. ನುಗ್ಗೆಕಾಯಿ, ಹಸಿ ಬಟಾಣಿ ದರ ಕೂಡ ಭಾರೀ ಏರಿಕೆಯಾಗಿದ್ದು, ಜನಸಾಮಾನ್ಯರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular