HomeLatest Newsಮಾಜಿ ಕೇಂದ್ರ ಸಚಿವರ ಪುತ್ರ ಸೇರಿ ಇತರರಿಗೆ ಬರೋಬ್ಬರಿ 23 ಕೋಟಿ ರೂ. ವಂಚಿಸಿ ಪರಾರಿಯಾಗಿದ್ದ...

ಮಾಜಿ ಕೇಂದ್ರ ಸಚಿವರ ಪುತ್ರ ಸೇರಿ ಇತರರಿಗೆ ಬರೋಬ್ಬರಿ 23 ಕೋಟಿ ರೂ. ವಂಚಿಸಿ ಪರಾರಿಯಾಗಿದ್ದ ದಂಪತಿ ಅರೆಸ್ಟ್

ಧಾರವಾಡ: ಹೈದರಾಬಾದ್ ನಲ್ಲಿ ಮಾಜಿ ಕೇಂದ್ರ ಸಚಿವ ಪಿ. ಶಿವಶಂಕರ್ ಅವರ ಪುತ್ರ ಪಿ. ವಿನಯಕುಮಾರ್ ಸೇರಿದಂತೆ ಇತರರಿಗೆ 23 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.

ಕಳೆದ ತಿಂಗಳು ಬಂಧನಕ್ಕೆ ಒಳಗಾಗಿ ತಪ್ಪಿಸಿಕೊಂಡಿದ್ದ ದಂಪತಿಯನ್ನು ಧಾರವಾಡ ಜಿಲ್ಲಾ ಪೊಲೀಸರು ಬಂಧಿಸಿ ಹೈದರಾಬಾದ್ ಪೊಲೀಸರಿಗೆ ಒಪ್ಪಿಸಿದ್ದಾರೆ.

ಹೈದರಾಬಾದ್ ನ ಸತೀಶ ಉಪ್ಪಾಲಪಟ್ಟಿ, ಶಿಲ್ಪಾ ಬಂಡಾ ಬಂಧಿತ ದಂಪತಿ. ಅಕ್ಟೋಬರ್ 23ರಂದು ಮಹಾರಾಷ್ಟ್ರದಲ್ಲಿ ಅವರನ್ನು ಬಂಧಿಸಿದ ಹೈದರಾಬಾದ್ ಪೊಲೀಸರು ಕರೆದುಕೊಂಡು ಹೋಗುವಾಗ ಸದಾಶಿವಪೇಟೆಯಲ್ಲಿ ಊಟಕ್ಕೆ ನಿಲ್ಲಿಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಂಪತಿ ಬೇರೆ ಬೇರೆ ರಾಜ್ಯಗಳಲ್ಲಿ ಸುತ್ತಾಡುತ್ತಿದ್ದರು. ಶುಕ್ರವಾರ ಹುಬ್ಬಳ್ಳಿ -ಧಾರವಾಡ ಬೈಪಾಸ್ ಮೂಲಕ ಹೋಗುತ್ತಿರುವ ಬಗ್ಗೆ ಮಾಹಿತಿ ಆಧರಿಸಿ ಧಾರವಾಡ ಪೊಲೀಸರು ಆರೋಪಿಗಳ ಜೊತೆಗೆ ಪ್ರಯಾಣಿಸುತ್ತಿದ್ದ ಮೂವರು ಸೇರಿದಂತೆ ಐವರನ್ನು ಬಂಧಿಸಿ ಹೈದರಾಬಾದ್ ಪೊಲೀಸರಿಗೆ ಒಪ್ಪಿಸಿದ್ದಾರೆ.

ಖಾಸಗಿ ಕಂಪನಿಯಲ್ಲಿ ಉತ್ತಮ ಆದಾಯ ನೀಡುವ ಭರವಸೆಯೊಂದಿಗೆ ಜನರಿಗೆ ಹಣ ಹೂಡಿಕೆಗೆ ಮನವೊಲಿಸಿದ್ದ ಆರೋಪಿಗಳು 23 ಕೋಟಿ ಸಂಗ್ರಹಿಸಿದ್ದರು. ಹೈದರಾಬಾದ್ ಸೆಂಟ್ರಲ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular