ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ತುಫೈಲ್ ನಿಯಾಜ್ ಎಂದು ಗುರುತಿಸಲಾಗಿದೆ. ಈತ ಆತ್ಮಾಹುತಿ ಬಾಂಬರ್ ಉಮರ್ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ತುಫೈಲ್ ನಿಯಾಜ್ ನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.
ನವೆಂಬರ್ 10ರಂದು ಸಂಜೆ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ i20 ಕಾರು ಸ್ಫೋಟಗೊಂಡಿತ್ತು. ಆತ್ಮಾಹುತಿ ಬಾಂಬರ್ ಕಾರು ಸ್ಫೋಟಿಸಿದ್ದ. ಘಟನೆಯಲ್ಲಿ 15 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕೃತ್ಯದ ಹಿಂದೆ ವೈಟ್ ಕಾಲರ್ ಉಗ್ರರ ಕೈವಾಡವಿರುದು ದೃಢಪಟ್ಟಿದೆ.
