ಬೆಂಗಳೂರು: ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ನನಗೆ ಮೊದಲಿನಿಂದಲೂ ಸಿಎಂ ಆಗಬೇಕು ಎಂಬ ಆಸೆಯಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ನಾನೂ ಸಿಎಂ ಹುದ್ದೆಯ ಆಕಾಂಕ್ಷಿ. ನಾನು ಯಾವತ್ತೂ ರೇಸ್ ನಲ್ಲಿ ಇದ್ದೇನೆ. ಬದಲಾವಣೆ ವಿಚಾರ ಬಂದಾಗ ನೋಡೋಣ ಎಂದು ಹೇಳಿದರು.
2013ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದ್ವಿ. ನಾನೊಬ್ಬನೇ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದು ಎಂದು ನಾನೆಲ್ಲೂ ಹೇಳಿಲ್ಲ. ಎಲ್ಲರೂ ಸೇರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದೆವು. ಬಳಿಕ ನಡೆದ ಚುನಾವಣೆಯಲ್ಲಿ ನಾನು ಸೋತೆ. ಒಂದು ವೇಳೆ ಗೆದ್ದಿದ್ದರೆ ಏನಾದರೂ ಆಗುತ್ತಿತ್ತೇನೋ. ಕೆಪಿಸಿಸಿ ಅಧ್ಯಕ್ಷರಾದವರಿಗೆ ಸಹಜವಾಗಿ ಸಿಎಂ ಸ್ಥಾನಕ್ಕೆ ಆಯ್ಕೆಯಾಗಬಹುದಾದ ಅವಕಾಶ ಇರುತ್ತದೆ. ಆದರೆ ಅದು ಎಲ್ಲಾ ಸಮಯದಲ್ಲಿಯೂ ಆಗಲ್ಲ ಎಂದು ಹೇಳಿದರು.
ನನಗೆ ಮೊದಲಿನಿಂದಲೂ ಸಿಎಂ ಆಗಬೇಕು ಎಂಬ ಆಸೆಯಿದೆ. ಹಾಗಾಗಿ ನಾನು ಯಾವತ್ತೂ ರೇಸ್ ನಲ್ಲಿ ಇರುತ್ತೇನೆ ಎಂದು ಹೇಳಿದರು.
