HomeLatest Newsಕುರ್ಚಿ ಕಿತ್ತಾಟದ ನಡುವೆ ಕಾಂಗ್ರೆಸ್ ನಲ್ಲಿ ಶಾಸಕರ ಖರೀದಿ: 50 ಕೋಟಿ ಜತೆಗೆ 1 ಫ್ಲ್ಯಾಟ್,...

ಕುರ್ಚಿ ಕಿತ್ತಾಟದ ನಡುವೆ ಕಾಂಗ್ರೆಸ್ ನಲ್ಲಿ ಶಾಸಕರ ಖರೀದಿ: 50 ಕೋಟಿ ಜತೆಗೆ 1 ಫ್ಲ್ಯಾಟ್, ಫಾರ್ಚೂನರ್ ಕಾರ್ ಆಫರ್: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕಿತ್ತಾಟಕ್ಕಿಂತ ಹೆಚ್ಚಾಗಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆದ ವಿಚಾರದ ಬಗ್ಗೆ ಮಾತನಾಡಿ, ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂ. ಕೊಡುತ್ತಿದ್ದಾರೆ ಎಂದು ಕೇಳಿಪಟ್ಟಿದ್ದೆವು. ಈಗ ಸ್ವಲ್ಪ ಚೌಕಾಸಿ ಹೆಚ್ಚಾಗಿದೆ. ಕೆಲವರು 75 ಕೋಟಿ ರೂ. ಕೇಳುತ್ತಿದ್ದಾರೆ. 75 ಕೋಟಿ, 100 ಕೋಟಿ ಕೊಟ್ಟರೆ ಬರುತ್ತೇವೆ ಎಂದು ಹೇಳುತ್ತಿದ್ದಾರೆ. ಇವರು ಅಷ್ಟು ಆಗುವುದಿಲ್ಲ. ಇವತ್ತು ಎಷ್ಟು ಇದೆ ತಗೊಳ್ಳಿ ಎನ್ನುತ್ತಿದ್ದಾರೆ ಎಂದು ಹೇಳಿದ್ದಾರೆ.

50 ಕೋಟಿ ಹಣದ ಜೊತೆಗೆ ಒಂದು ಫ್ಲ್ಯಾಟ್ ಕೊಡುವ ಆಫರ್ ಕೊಟ್ಟಿದ್ದಾರೆ. ಜೊತೆ ಒಂದು ಫಾರ್ಚೂನರ್ ಕಾರ್  ಕೊಡ್ತೀವಿ ಅಂತಾನೂ ಹೇಳುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಆಫರ್ ನಡೆಯುತ್ತಿದೆ ಎಂದು ನನಗೆ ಮೆಸೇಜ್ ಬಂದಿದೆ ಬೆಂಗಳೂರಿನಲ್ಲಿ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular